ಹೊಸದಿಲ್ಲಿ: ದಿನಗಳೆದಂತೆ ದೇಶದ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಶುಕ್ರವಾರ ಒಂದೇ ದಿನ ದೇಶದಲ್ಲಿ ಗರಿಷ್ಠ 77,266 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಇದರೊಂದಿಗೆ 24 ಗಂಟೆಯಲ್ಲಿ 1,057 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 33,87,501ಕ್ಕೆ ಏರಿಕೆಯಾಗಿದೆ. ಇವರಲ್ಲಿ 61,529 ಮಂದಿ ಸಾವನ್ನಪ್ಪಿದ್ದು, ಇನ್ನೂ 7,42,023 ಸಕ್ರಿಯ ಪ್ರಕರಣಗಳಿವೆ.
ಭಾರತದಲ್ಲಿ ಕಳೆದ ಐದು ತಿಂಗಳಿನಲ್ಲಿ 3/4 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಚೇತರಿಸಿಕೊಂಡಿವೆ ಹಾಗೂ 1/4 ಕ್ಕಿಂತ ಕಡಿಮೆ ಪ್ರಕರಣಗಳು ಮಾತ್ರ ಈಗ ಸಕ್ರೀಯವಾಗಿವೆ ಎಂದು ಅರೋಗ್ಯ ಇಲಾಖೆ ಹೇಳಿದೆ.
ಕೇಂದ್ರ ಅರೋಗ್ಯ ಇಲಾಖೆ ನಡೆಸಿದ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಅರೋಗ್ಯ ಇಲಾಖೆಯ ವರದಿಯ ಬೆನ್ನಲ್ಲೇ ಗುರುವಾರ (ಆಗಸ್ಟ್ 27) ಕೋವಿಡ್ ಸೋಂಕಿತರ ಸಂಖ್ಯೆ ಒಂದೇ ದಿನ 75,760 ಹೊಸ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆಯಲ್ಲಿ ಗರಿಷ್ಠ ಏರಿಕೆಯಾಗಿದೆ ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33 ಲಕ್ಷ ಗಡಿಯನ್ನು ದಾಟಿದೆ ಎನ್ನಲಾಗಿದೆ.
ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೇಳಿಕೆ ಪ್ರಕಾರ ಸದ್ಯ 7,25,991 ಸಕ್ರೀಯ ಪ್ರಕರಣಗಳಿದ್ದು, 25,23,771 ಜನರು ಚೇತರಿಸಿಕೊಂಡಿದ್ದಾರೆ ಜೊತೆಗೆ 60,472 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.