ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಹೆಚ್ಚಿನ ಪ್ರಮಾಣದ ಸಾವು ಸಂಭವಿಸತೊಡಗಿದೆ. ಏತನ್ಮಧ್ಯೆ ಕಳೆದ 24ಗಂಟೆಗಳಲ್ಲಿ ದಾಖಲೆಯ 4,14,188 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್ ಸೋಂಕು ಪ್ರಕರಣ 36,45,164ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ(ಮೇ 07) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 3,915 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ, ಬೆಡ್ ಸಮಸ್ಯೆ, ಆಕ್ಸಿಜನ್ ಕೊರತೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ವರದಿ ಹೇಳಿದೆ.
ಭಾರತದಲ್ಲಿ ಕೋವಿಡ್ ಎರಡನೇ ಅಲೆ ಮಾರಣಾಂತಿಕವಾಗಿದ್ದು, ಒಟ್ಟು 2,14,91,598 ಕೋವಿಡ್ ಪ್ರಕರಣ ವರದಿಯಾಗಿದೆ. ಈವರೆಗೆ ಕೋವಿಡ್ ಸೋಂಕಿನಿಂದ 2,34,083 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,76,12,351 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.\
ಇಡೀ ಜಗತ್ತಿನಲ್ಲಿಯೇ ಅತೀ ಹೆಚ್ಚು ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿರುವ ದೇಶಗಳಲ್ಲಿ ಅಮೆರಿಕ ಮೊದಲನೇ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ. ಕಳೆದ ಎರಡು ದಿನಗಳಿಂದ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗುತ್ತಿರುವುದಾಗಿ ವರದಿ ತಿಳಿಸಿದೆ.