ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಮೇ 19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಜಿಂದಾಲ್ ತಾತ್ಕಾಲಿಕ ಕೋವಿಡ್ ಆಸ್ಪತ್ರೆಗೆ ಆಗಮಿಸಿದ ಗುಜರಾತ್ ನರ್ಸಿಂಗ್ ವಿದ್ಯಾರ್ಥಿಗಳು
ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 4,529 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ (ಮೇ 18) ಕೋವಿಡ್ ನಿಂದ 4,329 ಮಂದಿ ಸಾವನ್ನಪ್ಪಿದ್ದು, ಇಂದು ದಾಖಲೆ ಪ್ರಮಾಣದಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ವರದಿ ಹೇಳಿದೆ.
ಸಚಿವಾಲಯ ಬಿಡುಗಡೆಗೊಳಿಸಿರುವ ಮಾಹಿತಿ ಪ್ರಕಾರ 24ಗಂಟೆಗಳಲ್ಲಿ 2,67,334 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೇ 3,89,851 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಈಗ 32,26,719 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ಸೇರಿದಂತೆ ಎಂಟು ರಾಜ್ಯಗಳಲ್ಲಿ ದೇಶದ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳಿಗಿಂತ ಹೆಚ್ಚು ಸೋಂಕು ಪ್ರಕರಣ ವರದಿಯಾಗಿದೆ ಎಂದು ವರದಿ ತಿಳಿಸಿದೆ.