ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಕಳೆದ 24ಗಂಟೆಯಲ್ಲಿ 57,117 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಆಗಸ್ಟ್ 1(2020)ರಂದು ದೇಶದಲ್ಲಿ ಕೋವಿಡ್ 19 ಪ್ರಕರಣದ ಸಂಖ್ಯೆ 16,95,988ಕ್ಕೆ ತಲುಪಿರುವುದಾಗಿ ವರದಿ ತಿಳಿಸಿದೆ.
ದೇಶದಲ್ಲಿ ಕಳೆದ 24ಗಂಟೆಯಲ್ಲಿ 57,117 ಕೋವಿಡ್ 19 ಪ್ರಕರಣ ಹಾಗೂ 764 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವಾಲಯದ ಅಂಕಿ ಅಂಶ ತಿಳಿಸಿದೆ. ದೇಶದಲ್ಲಿ 5,65,103 ಸಕ್ರಿಯ ಪ್ರಕರಣಗಳಿವೆ. ಅಲ್ಲದೇ ಈವರೆಗೆ 10,94,374 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ವಿವರಿಸಿದೆ.
ಕೋವಿಡ್ 19 ಸೋಂಕಿನಿಂದಾಗಿ ಶನಿವಾರ(ಆಗಸ್ಟ್ 01-2020)ದವರೆಗೆ 36,511 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಶೇ.64.52ರಷ್ಟು ಇದೆ ಎಂದು ಸಚಿವಾಲಯ ತಿಳಿಸಿದೆ.
ಸತತವಾಗಿ ಕಳೆದ ಮೂರು ದಿನಗಳಿಂದ ದೇಶದಲ್ಲಿ 50 ಸಾವಿರಕ್ಕಿಂತಲೂ ಅಧಿಕ ಕೋವಿಡ್ 19 ಪ್ರಕರಣಗಳು ಪತ್ತೆಯಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 1,50,966ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ 57,968 ಪ್ರಕರಣ ಪತ್ತೆಯಾಗಿದೆ. ಕರ್ನಾಟಕದಲ್ಲಿ 72,013 ಪ್ರಕರಣ ಹಾಗೂ ಆಂಧ್ರಪ್ರದೇಶದಲ್ಲಿ 75,720 ಕೋವಿಡ್ 19 ಪ್ರಕರಣ ಪತ್ತೆಯಾಗಿರುವುದಾಗಿ ವರದಿಯಾಗಿದೆ.