ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 30,000ಕ್ಕಿಂತ ಕಡಿಮೆ ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 132 ದಿನಗಳ ನಂತರ ವರದಿಯಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಜುಲೈ 27) ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹೊಸ ಪುಟ ಆರಂಭವಾಗಿದೆ, ಬಿಜೆಪಿಯಲ್ಲಿ ನಾಯಕರಿಗೆ ಕೊರತೆಯಿಲ್ಲ:ಗೋ ಮಧುಸೂದನ್
ಕಳೆದ 24ಗಂಟೆಗಳಲ್ಲಿ 29,689 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 415 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,00,000 ಲಕ್ಷಕ್ಕಿಂತ ಕೆಳಕ್ಕೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.
ಪ್ರಸ್ತುತ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,98,100ಕ್ಕೆ ಇಳಿಕೆಯಾಗಿದೆ. ಇದು ಕಳೆದ 124 ದಿನಗಳ ನಂತರದ ಕಡಿಮೆ ಪ್ರಮಾಣದ್ದಾಗಿದೆ. ದೇಶದ ವಾರದ ಪಾಸಿಟಿವಿಟಿ ದರ ಶೇ.2.33ರಷ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.1.73ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 415 ಮಂದಿ ಸಾವನ್ನಪ್ಪಿದ್ದು, 42,363 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ 4,21,382 ಮಂದಿ ಸಾವನ್ನಪ್ಪಿದ್ದಾರೆ.