Advertisement

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 59,118 ಕೋವಿಡ್ ಪ್ರಕರಣ ಪತ್ತೆ, 4 ಲಕ್ಷ ಸಕ್ರಿಯ ಪ್ರಕರಣ

12:30 PM Mar 26, 2021 | Team Udayavani |

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಶುಕ್ರವಾರ (ಮಾರ್ಚ್ 26) ಬೆಳಗ್ಗೆ 8ಗಂಟೆಗೆ ಕೊನೆಗೊಂಡ 24ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 59,118 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕು ಪೀಡಿತರ ಸಂಖ್ಯೆ 1.18 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement

ಇದನ್ನೂ ಓದಿ:ರೈತರ ಭಾರತ್ ಬಂದ್ ಕರೆಗೆ ದೆಹಲಿ ಗಡಿ ಹೊರತುಪಡಿಸಿ ಇತರೆಡೆ ನೀರಸ ಪ್ರತಿಕ್ರಿಯೆ

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4 ಲಕ್ಷ ದಾಟಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಸಂಖ್ಯೆ 4,21,066ಕ್ಕೆ ಹೆಚ್ಚಳವಾಗಿದೆ. ಅಲ್ಲದೇ ಶೇ.95.09ಕ್ಕೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.

ಭಾರತದಲ್ಲಿ ಸತತ 16 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಕಳೆದ 24ಗಂಟೆಯಲ್ಲಿ 257 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,60,949ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ಮಹಾರಾಷ್ಟ್ರದಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಈವರೆಗೆ 26,00,833 ಕೋವಿಡ್ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 35,952 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಗುರುವಾರ ಮಹಾರಾಷ್ಟ್ರದಲ್ಲಿ ಕೋವಿಡ್ ನಿಂದ 111 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 53,795ಕ್ಕೆ ಏರಿಕೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next