Advertisement

ಭಾರತದಲ್ಲಿ 24ಗಂಟೆಯಲ್ಲಿ 1,94,720 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ 4,868ಕ್ಕೆ ಏರಿಕೆ

10:22 AM Jan 12, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಕೋವಿಡ್ ಸೋಂಕು ಪ್ರಕರಣ 2,0000 ಸನಿಹಕ್ಕೆ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಜನವರಿ 12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಹ್ಯಾಂಡ್ಸಮ್ ಹುಡುಗ ಸೂರಜ್ ಗೌಡ ಸ್ಟೈಲಿಸ್ಟ್ ಫೋಟೋ ಗ್ಯಾಲರಿ

ದೇಶದಲ್ಲಿ ಒಂದೇ ದಿನದಲ್ಲಿ 1,94,720 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, 442 ಮಂದಿ ಸಾವನ್ನಪ್ಪಿರುವುದಾಗಿ ಅಂಕಿಅಂಶದಲ್ಲಿ ವಿವರಿಸಿದೆ. ಸತತ ನಾಲ್ಕು ದಿನಗಳಿಂದ ಭಾರತದಲ್ಲಿ 1. 5ಲಕ್ಷಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ.

ಭಾರತದಲ್ಲಿ ಪಾಸಿಟಿವಿಟಿ ದರ ಶೇ.11.5ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 9,55,319ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,868ಕ್ಕೆ ಹೆಚ್ಚಳವಾಗಿದೆ. ಇದರಲ್ಲಿ 1805 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.

28 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 1,281 ಪ್ರಕರಣ, ರಾಜಸ್ಥಾನ್ 645, ದೆಹಲಿ 546, ಕರ್ನಾಟಕ 479 ಹಾಗೂ ಕೇರಳದಲ್ಲಿ 350 ಪ್ರಕರಣ ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next