ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಾಖಲೆಯ ಮಟ್ಟದಲ್ಲಿ ಹೆಚ್ಚಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 4,12,262 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಇದೇ ಅವಧಿಯಲ್ಲಿ ದೇಶದಲ್ಲಿ 3980 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಾವಿನ ಸಂಖ್ಯೆ 230168ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಐದು ರಾಜ್ಯಗಳಲ್ಲಿ ಹೆಚ್ಚಿನ ಸೋಂಕಿತರ ಸಂಖ್ಯೆ ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ 57,640, ಕರ್ನಾಟಕದಲ್ಲಿ 50112, ಕೇರಳದಲ್ಲಿ 41,953, ಉತ್ತರ ಪ್ರದೇಶದಲ್ಲಿ 31,111 ಮತ್ತು ತಮಿಳುನಾಡು ರಾಜ್ಯದಲ್ಲಿ 23,310 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ದೇಶದ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಶೇ.49.52 ರಷ್ಟು ಈ ಐದು ರಾಜ್ಯಗಳಲ್ಲಿಯೇ ಕಂಡುಬಂದಿದೆ.
ಇದನ್ನೂ ಓದಿ:ಡಿಸಿಎಂ ನೇತೃತ್ವದಲ್ಲಿ ಆಪರೇಷನ್ ಆಕ್ಸಿಜನ್;ತಪ್ಪಿದ ಭಾರೀ ಅನಾಹುತ,ಉಳಿಯಿತು 200 ಸೋಂಕಿತರ ಜೀವ
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. 920 ಮಂದಿ ಸೋಂಕಿತರು ಮಹಾರಾಷ್ಟ್ರದಲ್ಲಿ ಮರಣ ಹೊಂದಿದ್ದರೆ, ಉತ್ತರ ಪ್ರದೇಶದಲ್ಲಿ 353 ಮಂದಿ ಸೋಂಕಿತರು ಮರಣ ಹೊಂದಿದ್ದಾರೆ.
ಈ 24 ಗಂಟೆಯಲ್ಲಿ 3,29,113 ಮಂದಿ ಸೋಂಕಿನಿಂದ ಗುಣಮುಖ ಹೊಂದಿದ್ದಾರೆ. ಸದ್ಯ ದೇಶದಲ್ಲಿ 35,66,398 ಸಕ್ರಿಯ ಕೋವಿಡ್ ಪಾಸಿಟಿವ್ ಪ್ರಕರಣಗಳಿವೆ.