ನವದೆಹಲಿ: ಭಾರತದಲ್ಲಿ ಕೆಲವು ದಿನಗಳಿಂದ ಸತತವಾಗಿ ಇಳಿಕೆಯಾಗುತ್ತಿದ್ದ ಕೋವಿಡ್ 19 ಸೋಂಕು ಪ್ರಕರಣ ಕಳೆದ 24ಗಂಟೆಗಳಲ್ಲಿ 1,34,154ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜೂನ್ 03) ಬಿಡುಗಡೆ ಮಾಡಿದ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮೆಹುಲ್ ಚೋಕ್ಸಿಗೆ ಜಾಮೀನು ನಿರಾಕರಿಸಿದ ಡೊಮಿನಿಕಾ ಕೋರ್ಟ್
ಬುಧವಾರ (ಜೂನ್ 02) ದೇಶದಲ್ಲಿ 1,32,788 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿತ್ತು. ಇಂದಿನ ಹೊಸ ಪ್ರಕರಣಗಳ ಸೇರ್ಪಡೆಯಿಂದ ಒಟ್ಟು ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ 2,84,41,986ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶದ ಪ್ರಕಾರ, ಕಳೆದ 24ಗಂಟೆಗಳಲ್ಲಿ ಒಟ್ಟು 2,11,499 ಮಂದಿ ಗುಣಮುಖರಾಗಿದ್ದು, 2,887 ಮಂದಿ ಸಾವನ್ನಪ್ಪಿದ್ದಾರೆ.
ಸುಮಾರು 35 ದಿನಗಳ ನಂತರ ಸಾವಿನ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,37,989ಕ್ಕೆ ಹೆಚ್ಚಳವಾಗಿದೆ. ದೇಶದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 2,63,90,584ಕ್ಕೆ ತಲುಪಿದೆ. ಇದರೊಂದಿಗೆ ಚೇತರಿಕೆ ಪ್ರಮಾಣ 97.79ಕ್ಕೆ ಏರಿಕೆಯಾಗಿದೆ.