ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,35,532 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 871 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಒಟ್ಟು 4,93,198 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜನವರಿ 29) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಜಮೀನಿನಲ್ಲಿ ಅವರೆ ಕೊಯ್ಯುತ್ತಿರುವ ವೇಳೆ ಚಿನ್ನದ ಸರ ಕಿತ್ತು ಪರಾರಿ
24ಗಂಟೆಯಲ್ಲಿ 1,01,278 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 20,04,333ಕ್ಕೆ ತಲುಪಿದೆ.
ಒಂದೇ ದಿನದಲ್ಲಿ ದೇಶದಲ್ಲಿ 3,35,939 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ದೇಶಾದ್ಯಂತ ಈವರೆಗೆ ಒಟ್ಟು 3,83,60,710 ಮಂದಿ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.60ರಷ್ಟಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ದಿನದ ಪಾಸಿಟಿವಿಟಿ ದರ ಶೇ.13.39ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.16.89ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ಹೇಳಿದೆ. ದೇಶಾದ್ಯಂತ ಈವರೆಗೆ 165.04 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.