Advertisement

ದೇಶದಲ್ಲಿ ಸತತ 6 ದಿನಗಳಿಂದ ಕೋವಿಡ್ ಪ್ರಕರಣ ಇಳಿಕೆ: ಕಳೆದ 24 ಗಂಟೆಗಳಲ್ಲಿ 4,194 ಸಾವು

10:30 AM May 22, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.57 ಲಕ್ಷ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,194 ಸಾವು ಸಂಭವಿಸಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಗಾಬ್ಬಾದಲ್ಲಿ ಪೂಜಾರ ಆಸ್ಟ್ರೇಲಿಯಾ ಆಟಗಾರನಂತೆ ಆಡಿದ್ದ: ಮಾರ್ಕಸ್ ಹ್ಯಾರಿಸ್

ದೇಶದಲ್ಲಿ 2,57,299 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, 3,57,630 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ 29,23,400 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 2,95,525 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಅಲ್ಲದೇ 2,30,70,365 ಮಂದಿ ಚೇತರಿಸಿಕೊಂಡಿದ್ದಾರೆ.

ಕಳೆದ ಆರು ದಿನಗಳಿಂದ ಭಾರತದಲ್ಲಿ 3 ಲಕ್ಷಕ್ಕಿಂತ ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣ ವರದಿಯಾಗುತ್ತಿದ್ದು, ಕೋವಿಡ್ 19 ಸೋಂಕು ಪೀಡಿತರ ಚೇತರಿಕೆ ಪ್ರಮಾಣವೂ ಹೆಚ್ಚಳವಾಗುತ್ತಿರುವುದಾಗಿ ಅಂಕಿಅಂಶ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next