Advertisement

ಭಾರತದಲ್ಲಿ 24ಗಂಟೆಗಳಲ್ಲಿ 2.76 ಲಕ್ಷ ಕೋವಿಡ್ ಪ್ರಕರಣ ಪತ್ತೆ, 20.55 ಲಕ್ಷ ಕೋವಿಡ್ ಟೆಸ್ಟ್

10:13 AM May 20, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.76 ಲಕ್ಷ ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 3,874 ಸಾವು ಸಂಭವಿಸಿದೆ ಎಂದು ಗುರುವಾರ(ಮೇ 20) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ದೇಶದಲ್ಲಿ 24 ಗಂಟೆಗಳಲ್ಲಿ 2,76,070 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,57,72,400 ಕೋಟಿಗೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 31, 29,878ರಷ್ಟು ಹೆಚ್ಚಳವಾಗಿದೆ.

ಭಾರತದಲ್ಲಿ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸೋಂಕಿನಿಂದಾಗಿ ಈವರೆಗೆ ಒಟ್ಟು 2,66,207 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ ದಾಖಲೆಯ ಪ್ರಮಾಣದ 20.55 ಲಕ್ಷ ಕೋವಿಡ್ ಸ್ಯಾಂಪಲ್ಸ್ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ಅನಾರೋಗ್ಯದಿಂದ ಬಳಲಿದವರು ಮೂರು ತಿಂಗಳ ನಂತರ ಕೋವಿಡ್ 19 ಲಸಿಕೆಯನ್ನು ಪಡೆಯಲು ರಾಷ್ಟ್ರೀಯ ತಜ್ಞರ ಸಮಿತಿ ಶಿಫಾರಸು ಮಾಡಿದ್ದು, ಇದನ್ನು ಕೇಂದ್ರ ಸರ್ಕಾರ ಬುಧವಾರ ಅಂಗೀಕರಿಸಿರುವುದಾಗಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next