ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4,106 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಮೇ 17) ಬೆಳಗ್ಗೆ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅರಬ್ಬಿ ಸಮುದ್ರದ ಮಧ್ಯೆ ಸಿಲುಕಿರುವ ಟಗ್: ಕೊನೆಗೂ ರಕ್ಷಣಾ ಕಾರ್ಯ ಆರಂಭ
ಅಧಿಕೃತ ಅಂಕಿಅಂಶದ ಪ್ರಕಾರ, ಒಂದೇ ದಿನದಲ್ಲಿ 2,81,386 ಕೋವಿಡ್ ಪ್ರಕರಣ ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ 2.49 ಕೋಟಿಗೆ ಏರಿಕೆಯಾಗಿದೆ. ಭಾರತದಲ್ಲಿ 35,16,997 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 2,74,390ಕ್ಕೆ ಹೆಚ್ಚಳವಾಗಿದೆ. ಈವರೆಗೆ ಕೋವಿಡ್ 19 ಸೋಂಕಿನಿಂದ 2.11 ಕೋಟಿಗಿಂತಲೂ ಅಧಿಕ ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಕೋವಿಡ್ ಎರಡನೇ ಅಲೆಗೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಭಾನುವಾರ ದೇಶದಲ್ಲಿ 3,11,170 ಕೋವಿಡ್ ಪ್ರಕರಣ ವರದಿಯಾಗಿದ್ದು, 4077 ಮಂದಿ ಸಾವನ್ನಪ್ಪಿದ್ದರು.