Advertisement

ಭಾರತ: ಕಳೆದ 24ಗಂಟೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ, ಸಾವಿನ ಪ್ರಮಾಣ ಇಳಿಕೆ

12:03 PM Jul 14, 2021 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣದಲ್ಲಿ ಸ್ವಲ್ಪ ಹೆಚ್ಚಳವಾಗಿದ್ದು, ಕಳೆದ 24ಗಂಟೆಗಳಲ್ಲಿ 38,792 ಕೋವಿಡ್ ಪ್ರಕರಣ ಪತ್ತೆಯಾಗಿದೆ. 624 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಜುಲೈ) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕೊಡಲಿಯಿಂದ ಹೊಡೆದು 11ನೇ ತರಗತಿ ವಿದ್ಯಾರ್ಥಿನಿ ಹತ್ಯೆ: ಒಂದು ತಿಂಗಳ ಕಾಲ ಹಿಂಬಾಲಿಸಿದ್ದ!

ಕಳೆದ 24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ನಿಂದ 624 ಮಂದಿ ಸಾವನ್ನಪ್ಪಿದ್ದು, 41 ಸಾವಿರ ಜನರು ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,09,46,074ಕ್ಕೆ ಏರಿಕೆಯಾಗಿದೆ. ಈವರೆಗೆ 3,01,04,720 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ನಿಂದ ದೇಶದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 4,11,408ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ, ಸದ್ಯ ದೇಶದಲ್ಲಿ 4,29,946 ಸಕ್ರಿಯ ಕೋವಿಡ್ ಪ್ರಕರಣಗಳು ಇದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next