ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 8,822 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದು ಮಂಗಳವಾರಕ್ಕಿಂತ ಶೇ.33.08ರಷ್ಟು ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಜೂನ್ 15) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪ್ರತೀಕಾರ-ಬ್ಯಾಂಕ್ ಮ್ಯಾನೇಜರ್ ಹತ್ಯೆಗೈದ ಉಗ್ರ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಸಾವು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 53,637ಕ್ಕೆ ಹೆಚ್ಚಳವಾಗಿದೆ. ದೇಶಾದ್ಯಂತ ಈವರೆಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,45,517ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
24 ಗಂಟೆಯಲ್ಲಿ ಕೋವಿಡ್ ನಿಂದ 15 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,792ಕ್ಕೆ ಏರಿಕೆಯಾದಂತಾಗಿದೆ ಎಂದು ಅಂಕಿ ಅಂಶ ವಿವರಿಸಿದೆ.
ದೇಶದ ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ 2,956, ಕೇರಳದಲ್ಲಿ 1,989, ದೆಹಲಿಯಲ್ಲಿ 1,118, ಕರ್ನಾಟಕದಲ್ಲಿ 594 ಮತ್ತು ಹರ್ಯಾಣದಲ್ಲಿ 430 ಪ್ರಕರಣ ಪತ್ತೆಯಾಗಿದೆ.
ಒಂದೇ ದಿನದಲ್ಲಿ 5,718 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಒಟ್ಟು 4,26,67,088 ಮಂದಿ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿನ ಚೇತರಿಕೆ ದರ ಶೇ.98.66ರಷ್ಟಿದೆ.