ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕಿನ ಎರಡನೇ ಅಲೆ ತೀವ್ರವಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 1,45,384 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ(ಏ.10) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮುಂಬೈ ವಿರುದ್ಧ ರೋಚಕ ಗೆಲುವು: ‘ಪಂಜಾಬ್ ಕಿಂಗ್ಸ್’ ತಂಡಕ್ಕೆ ಥ್ಯಾಂಕ್ಸ್ ಹೇಳಿದ್ದೇಕೆ RCB ?
ಸಚಿವಾಲಯದ ಅಂಕಿಅಂಶದ ಪ್ರಕಾರ, ದೇಶದಲ್ಲಿ ಕೋವಿಡ್ ಪ್ರಕರಣ ಒಟ್ಟು 1,32,05,926ಕ್ಕೆ ಏರಿಕೆಯಾಗಿದೆ. ಕಳೆದ ಆರೂವರೆ ತಿಂಗಳ ನಂತರ ಸಕ್ರಿಯ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ 10 ಲಕ್ಷ ದಾಟಿದೆ. ಕಳೆದ 24ಗಂಟೆಯಲ್ಲಿ 794 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ ಸಾವಿನ ಸಂಖ್ಯೆ 1,68,436ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಕಳೆದ 31ದಿನಗಳಿಂದ ದೇಶದಲ್ಲಿ ಸತತವಾಗಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದೆ. 10,46,631 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಚೇತರಿಕೆಯ ಪ್ರಮಾಣ 90.80ಕ್ಕೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ 1,19,90,859 ಮಂದಿ ಚೇತರಿಸಿಕೊಂಡಿದ್ದು, ಶುಕ್ರವಾರದವರೆಗೆ 11,73,219 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ 25,52,14,803ಕ್ಕೆ ತಲುಪಿದೆ ಎಂದು ಐಸಿಎಂಆರ್ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.