Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1.32 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಇಳಿಕೆ

10:58 AM Jun 04, 2021 | Team Udayavani |

ನವದೆಹಲಿ: ಭಾರತದಲ್ಲಿ ಕೆಲವು ದಿನಗಳಿಂದ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 1.32 ಲಕ್ಷ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 2,713 ಮಂದಿ ಸಾವನ್ನಪ್ಪಿರುವುದಾಗಿ ಶುಕ್ರವಾರ(ಜೂನ್ 04) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಭಿನ್ನ ಮಾದರಿಯಲ್ಲಿ ನಡೆಯಲಿದೆ SSLC ಪರೀಕ್ಷೆ: ಪರೀಕ್ಷೆ ಮಾದರಿ ತಿಳಿಸಿದ ಸಚಿವರು

ಇಂದು ಬೆಳಗ್ಗೆ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದ ಪ್ರಕಾರ, 24ಗಂಟೆಗಳಲ್ಲಿ 1,32,364 ನೂತನ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ ಎಂದು ಹೇಳಿದೆ.

ಗುರುವಾರ 1,34,154 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿತ್ತು. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ. ಇದು ಇಡೀ ಜಗತ್ತಿನಲ್ಲಿ ಪತ್ತೆಯಾದ ಹೆಚ್ಚು ಪ್ರಕರಣವಾಗಿದೆ.

ಭಾರತದಲ್ಲಿ 16,35,993 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ 2,65,97,655 ರೋಗಿಗಳು ಗುಣಮುಖರಾಗಿದ್ದಾರೆ. ಕಳೆದ 24ಗಂಟೆಗಳಲ್ಲಿ 2,07,071 ಮಂದಿ ಚೇತರಿಸಿಕೊಂಡಿರುವುದಾಗಿ ಅಂಕಿಅಂಶ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next