Advertisement

ಭಾರತದಲ್ಲಿ 24ಗಂಟೆಗಳಲ್ಲಿ 10,126 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಮತ್ತಷ್ಟು ಇಳಿಕೆ

11:33 AM Nov 09, 2021 | Team Udayavani |

ನವದೆಹಲಿ:ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 10,126 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 266 ದಿನಗಳಲ್ಲಿನ ಕನಿಷ್ಠ ಪ್ರಮಾಣದ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ನವೆಂಬರ್ 09) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪಿ,ನ್ಯಾಯವಾದಿ ರಾಜೇಶ್ ಪತ್ತೆಗಾಗಿ ಲುಕ್ ಔಟ್ ನೋಟೀಸ್

ಭಾರತದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,43,77,113ಕ್ಕೆ ತಲುಪಿದೆ. ಏತನ್ಮಧ್ಯೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,188ಕ್ಕೆ ಇಳಿಕೆಯಾಗಿದೆ. ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,40,638ಕ್ಕೆ ಇಳಿಕೆಯಾಗಿದ್ದು, ಇದು 263 ದಿನಗಳ ನಂತರದ ಕನಿಷ್ಠ ಪ್ರಮಾಣದ ಸಂಖ್ಯೆಯಾಗಿದೆ.

ಕಳೆದ 24ಗಂಟೆಗಳಲ್ಲಿ 332 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಒಟ್ಟು 4,61,389ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24ಗಂಟೆಗಳಲ್ಲಿ 11,982 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 3,37,75,086 ಮಂದಿ ಚೇತರಿಸಿಕೊಂಡಿದ್ದಾರೆ.

ಕೇರಳದಲ್ಲಿ 5,404 ಕೋವಿಡ್ ಪ್ರಕರಣ ವರದಿಯಾಗಿದ್ದು, ತಮಿಳುನಾಡಿನಲ್ಲಿ 841, ಮಿಜೋರಾಂನಲ್ಲಿ 730, ಮಹಾರಾಷ್ಟ್ರದಲ್ಲಿ 693 ಹಾಗೂ ಪಶ್ಚಿಮಬಂಗಾಳದಲ್ಲಿ 603 ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next