Advertisement

ಅಲ್ಪ ಹೆಚ್ಚಳ: ಭಾರತದಲ್ಲಿ 24 ಗಂಟೆಯಲ್ಲಿ 1,088 ಕೋವಿಡ್ ಪ್ರಕರಣ ಪತ್ತೆ, 26 ಮಂದಿ ಸಾವು

11:17 AM Apr 13, 2022 | Team Udayavani |

ನವದೆಹಲಿ: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,088 ಕೋವಿಡ್ ಪ್ರಕರಣ ಪತ್ತೆಯಾಗುವ ಮೂಲಕ ಅಲ್ಪ ಪ್ರಮಾಣದಲ್ಲಿ ಹೆಚ್ಚಳ ಕಂಡಿರುವುದಾಗಿ ಬುಧವಾರ (ಏಪ್ರಿಲ್ 13) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ದೇಶದಲ್ಲಿ ಈವರೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 4,30,38,016ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,870ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ವಿವರಿಸಿದೆ.

ಕಳೆದ 24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 26 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,736ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.76ರಷ್ಟಿದೆ. ಕಳೆದ 24 ಗಂಟೆಯಲ್ಲಿ 19 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶಾದ್ಯಂತ ಈವರೆಗೆ 186.07 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next