ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 11,106 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 459 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ನವೆಂಬರ್ 19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನ. 20 ರಿಂದ ಪಣಜಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ : ಅಪ್ಪುಗೆ ಶೃದ್ಧಾಂಜಲಿ
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 3,44,89,623ಕ್ಕೆ ಏರಿಕೆಯಾಗಿದೆ. ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,65,082ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ. ಕಳೆದ 24ಗಂಟೆಗಳಲ್ಲಿ 12,789 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಕಳೆದ 24ಗಂಟೆಗಳಲ್ಲಿ 2,142 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,26,620ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ.
ದೇಶದಲ್ಲಿನ ದಿನಂಪ್ರತಿಯ ಪಾಸಿಟಿವಿಟಿ ದರ ಶೇ.0.98ರಷ್ಟಿದೆ. ಕಳೆದ 46 ದಿನಗಳಿಂದ ಶೇ.2ಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ. ವಾರದ ಪಾಸಿಟಿವಿಟಿ ದರ ಶೇ.0.92ರಷ್ಟಿದೆ ಎಂದು ವರದಿ ತಿಳಿಸಿದೆ.