Advertisement

ಭಾರತ; ಕಳೆದ 24ಗಂಟೆಗಳಲ್ಲಿ 12,514 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.98

05:34 PM Nov 01, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 12,514 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,42,85.814ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ನವೆಂಬರ್ 01) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಪಶು ವೈದ್ಯಾಧಿಕಾರಿಗಳಿಂದ ಕನ್ನಡ ರಾಜ್ಯೋತ್ಸವಕ್ಕೆ ಅವಮಾನ

ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,58,817ಕ್ಕೆ ಇಳಿಕೆಯಾಗಿದ್ದು, ಇದು 248 ದಿನಗಳ ನಂತರದ ಕನಿಷ್ಠ ಸಂಖ್ಯೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶದಲ್ಲಿ ವಿವರಿಸಿದೆ.

ಕಳೆದ 24ಗಂಟೆಗಳಲ್ಲಿ 251 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,58,437ಕ್ಕೆ ತಲುಪಿದಿದೆ. ಕಳೆದ 24 ದಿನಗಳಿಂದ ದಿನಂಪ್ರತಿ 20,000 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.20ಕ್ಕೆ ತಲುಪಿದೆ.

Advertisement

Udayavani is now on Telegram. Click here to join our channel and stay updated with the latest news.

Next