ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,260 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,25,775ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಏಪ್ರಿಲ್ 02) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮತ್ತೆ ಏರಿಕೆ ಕಂಡ ತೈಲ ಬೆಲೆ; 12 ದಿನದಲ್ಲಿ 7.20 ರೂ. ಏರಿಕೆ ಕಂಡ ಪೆಟ್ರೋಲ್-ಡೀಸಲ್ ದರ
ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 83 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,21,264ಕ್ಕೆ ಏರಿಕೆಯಾಗಿದೆ. 24 ಗಂಟೆ ಅವಧಿಯಲ್ಲಿ 1,404 ಮಂದಿ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,24,92,326ಕ್ಕೆ ತಲುಪಿದೆ. ಕಳೆದ 24ಗಂಟೆಯಲ್ಲಿ 227 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.76ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಹಮ್ಮಿಕೊಂಡಿರುವ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 184.52 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.