ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 12,608 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,42,98,864ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 18) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,01,343ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ ಕೇರಳದಲ್ಲಿ ಸಂಭವಿಸಿದ 29 ಸಾವು ಸೇರಿದಂತೆ ಒಟ್ಟು 72 ಮಂದಿ ಸಾವನ್ನಪ್ಪಿದ್ದಾರೆ.
ಒಂದೇ ದಿನದಲ್ಲಿ 3,715 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.58ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.3.48ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.20ರಷ್ಟಿದೆ. ಈವರೆಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,36,70,315ಕ್ಕೆ ಏರಿಕೆಯಾಗಿದೆ.