Advertisement

ಭಾರತದಲ್ಲಿ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಹೆಚ್ಚಳ

11:13 AM Jul 05, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿವವರ ಒಟ್ಟು ಸಂಖ್ಯೆ 4,35,31,650ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜುಲೈ 05) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಬಾಲಕಿ: 3 ತಾಲೂಕಿನಲ್ಲಿ ರಜೆ ಘೋಷಣೆ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,14,475ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 19 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,242ಕ್ಕೆ ತಲುಪಿದೆ ಎಂದು ಸಚಿವಾಲಯ ಹೇಳಿದೆ.

ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.53ರಷ್ಟಿದೆ. ಒಂದೇ ದಿನದಲ್ಲಿ 611 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24ಗಂಟೆಯಲ್ಲಿ 4,51,312 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ದೇಶಾದ್ಯಂತ ಒಟ್ಟು 86.44 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಭಾರತದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.2.90ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.3.81ರಷ್ಟಿದೆ. 2021ರ ಮೇ 4ರಂದು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 2 ಕೋಟಿ ದಾಟಿತ್ತು. 2022ರ ಜನವರಿ 25ರಂದು ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ ಗಡಿ ದಾಟಿರುವುದಾಗಿ ಅಂಕಿಅಂಶ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next