ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 13,091 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,44,01,670ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ನವೆಂಬರ್ 11) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸೆಮಿ ಪಂದ್ಯಕ್ಕೂ ಮುನ್ನ ಪಾಕ್ ಗೆ ಶಾಕ್: ಜ್ವರದಿಂದ ಬಳಲುತ್ತಿದ್ದಾರೆ ಇಬ್ಬರು ಆಟಗಾರರು
ಬುಧವಾರ ಭಾರತದಲ್ಲಿ 11,466 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು 1,625 ಕೋವಿಡ್ ಪ್ರಕರಣಗಳು ಹೆಚ್ಚಳವಾದಂತಾಗಿದೆ. ಏತನ್ಮಧ್ಯೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,38,556ಕ್ಕೆ ತಲುಪಿದೆ. ಇದು ಕಳೆದ 266 ದಿನಗಳ ಕನಿಷ್ಠ ಸಂಖ್ಯೆಯಾಗಿದೆ.
ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 340 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,62,189ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.
ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ.98.25ರಷ್ಟಿದೆ. 24ಗಂಟೆಯಲ್ಲಿ 13,878 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ ಒಟ್ಟು 3,38,00,925 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ಹೇಳಿದೆ.