Advertisement

ಭಾರತದಲ್ಲಿ ಸತತ ಇಳಿಕೆಯತ್ತ ಕೋವಿಡ್ 19 ಪ್ರಕರಣ; 24ಗಂಟೆಗಳಲ್ಲಿ 1,32 ಲಕ್ಷ ಕೇಸ್ ಪತ್ತೆ

11:58 AM Jun 02, 2021 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆಯ ಇಳಿಕೆ ಪ್ರಮಾಣ ಮುಂದುವರಿದಿದ್ದು, ಕಳೆದ 24ಗಂಟೆಗಳಲ್ಲಿ 1,32,788 ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 3,207 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಬುಧವಾರ (ಜೂನ್ 02) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಭಾರತದಲ್ಲಿ ಕೋವಿಡ್ 2ನೇ ಅಲೆಯಲ್ಲಿ 594 ವೈದ್ಯರು ಸಾವು

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24ಗಂಟೆಗಳಲ್ಲಿ 2,31,456 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 2,61,79,085 ಮಂದಿ ಕೋವಿಡ್ ಸೋಂಕಿತರು ಚೇತರಿಸಿಕೊಂಡಿರುವುದಾಗಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 3,35,102ಕ್ಕೆ ಏರಿಕೆಯಾಗಿದೆ. ಒಟ್ಟು 17,93,645 ಸಕ್ರಿಯ ಕೋವಿಡ್ ಪ್ರಕರಣಗಳಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ 2,83,07,832ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶ ಹೇಳಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, ದೇಶದಲ್ಲಿ ಈವರೆಗೆ 21,85,46,667 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಜತೆಗೆ ಜೂನ್ 1ರವರೆಗೆ 35,00,57,330 ಜನರನ್ನು ಪರೀಕ್ಷಿಸಲಾಗಿದೆ. ಮಂಗಳವಾರ 20,19,773 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next