ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 14,506 ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದ್ದು, 30 ಜನರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಜೂನ್ 29) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ
ದೇಶಾದ್ಯಂತ ಈವರೆಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,33,345ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 30 ಜನರು ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,077ಕ್ಕೆ ಹೆಚ್ಚಳವಾಗಿದೆ.
ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.56ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.3.35ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.3.36ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶ ವಿವರಿಸಿದೆ.
ಒಂದೇ ದಿನದಲ್ಲಿ 11,574 ಜನರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,602ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 874 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, ನಾಲ್ಕು ಜನರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದಲ್ಲಿ 24ಗಂಟೆಯಲ್ಲಿ 3,482 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, ಐದು ಜನರು ಸಾವನ್ನಪ್ಪಿದ್ದಾರೆ. ರಾಜಧಾನಿ ಮುಂಬೈಯಲ್ಲಿ 1,290 ಕೋವಿಡ್ ಪ್ರಕರಣ ದೃಢಪಟ್ಟಿದೆ ಎಂದು ಅಂಕಿಅಂಶ ತಿಳಿಸಿದೆ.