Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,823 ಕೋವಿಡ್ ಪ್ರಕರಣ ಪತ್ತೆ, 226 ಮಂದಿ ಸಾವು

11:24 AM Oct 13, 2021 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಕಡಿಮೆಯಾಗತೊಡಗಿದ್ದು, ಕಳೆದ 24ಗಂಟೆಗಳಲ್ಲಿ 15,823 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,40,01,743ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಅಕ್ಟೋಬರ್ 13) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಬಿಎಸ್ ವೈ-ನನ್ನ ಭೇಟಿ ಸಾಬೀತು ಪಡಿಸಿದರೆ ರಾಜಕೀಯ ಸನ್ಯಾಸ : HDKಗೆ ಸಿದ್ದರಾಮಯ್ಯ ಸವಾಲು

ಕಳೆದ 24ಗಂಟೆಗಳಲ್ಲಿ 226 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,51,189ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,07,653ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 214 ದಿನಗಳ ನಂತರದ ಕನಿಷ್ಠ ಸಂಖ್ಯೆಯಾಗಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 22,844 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,33,42,901 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ತಿಳಿಸಿದೆ. ಕೇರಳದಲ್ಲಿ 7,823 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 106 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ 19 ದಿನಗಳಿಂದ ದೇಶದಲ್ಲಿ ದಿನಂಪ್ರತಿ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ವರದಿಯಾಗುತ್ತಿದೆ. ದಿನದ ಪಾಸಿಟಿವಿಟಿ ದರ ಶೇ.1.19ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.46ರಷ್ಟಿದೆ ಎಂದು ವರದಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next