ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,156 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,42,31,809ಕ್ಕೆ ಏರಿಕೆಯಾಗಿದೆ ಎಂದು ಗುರುವಾರ(ಅಕ್ಟೋಬರ್ 28) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಿನಿಮಾ ಪೈರಸಿ ಮಾಡಲು ಬಿಡುವುದಿಲ್ಲ,ಕಣ್ಣಿಡುತ್ತೇವೆ: ಸಚಿವ ಆರಗ ಜ್ಞಾನೇಂದ್ರ
ಕಳೆದ 24ಗಂಟೆಗಳಲ್ಲಿ 733 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,56,386ಕ್ಕೆ ಏರಿಕೆಯಾಗಿದೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,60,989ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 243 ದಿನಗಳ ಬಳಿಕದ ಕನಿಷ್ಠ ಸಂಖ್ಯೆಯಾಗಿದೆ ಎಂದು ಅಂಕಿಅಂಶ ಹೇಳಿದೆ.
ಸತತ 34 ದಿನಗಳಿಂದ ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದೆ. ಅಲ್ಲದೇ 123 ದಿನಗಳಿಂದ ದಿನಂಪ್ರತಿ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ.
ದೇಶದಲ್ಲಿ ಕೋವಿಡ್ ಸೋಂಕಿನ ಚೇತರಿಕೆ ಪ್ರಮಾಣ ಶೇ.98.20ರಷ್ಟಿದ್ದು, ಇದು 2020ರ ಮಾರ್ಚ್ ನಂತರದ ಅತೀ ಗರಿಷ್ಠ ಪ್ರಮಾಣದ್ದಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.