Advertisement

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 16,167 ಕೋವಿಡ್ ಸೋಂಕು ಪ್ರಕರಣ ದೃಢ, 41 ಮಂದಿ ಸಾವು

02:34 PM Aug 08, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,167 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,41,61,899ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಆಗಸ್ಟ್ 08) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಬಿಜೆಪಿಯವರಿಗೆ ತಾಕತ್ತಿದ್ದರೆ ಸಿದ್ದರಾಮೋತ್ಸವದ ಅರ್ಧದಷ್ಟು ಜನ ಸೇರಿಸಲಿ: ಎಂ ಬಿ ಪಾಟೀಲ್

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,35,510ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿನ ಸಾವಿನ ಸಂಖ್ಯೆ ಸೇರಿದಂತೆ 24ಗಂಟೆಯಲ್ಲಿ ಕೋವಿಡ್ ನಿಂದ 41 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಒಟ್ಟು 5,26,73ಕ್ಕೆ ತಲುಪಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.50ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶ ತಿಳಿಸಿದೆ. ಒಂದೇ ದಿನದಲ್ಲಿ ದೇಶದಲ್ಲಿ 577 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.6.14ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.4.64ಕ್ಕೆ ತಲುಪಿರುವುದಾಗಿ ವರದಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next