Advertisement

ಭಾರತದಲ್ಲಿ 24ಗಂಟೆಯಲ್ಲಿ 20,551 ಕೋವಿಡ್ ಸೋಂಕು ಪ್ರಕರಣ ಪತ್ತೆ, 70 ಮಂದಿ ಸಾವು

10:49 AM Aug 05, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 20,000ಕ್ಕಿಂತಲೂ ಅಧಿಕ ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,41,07,588ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಆಗಸ್ಟ್ 05) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಗೃಹ, ವಾಹನ ಸಾಲದ ಇಎಂಐ ಹೊರೆ ಏರಿಕೆ: ಆರ್ ಬಿಐನಿಂದ ಮತ್ತೆ ರೆಪೋ ದರ ಹೆಚ್ಚಳ

ಒಂದೇ ದಿನದಲ್ಲಿ 20,551 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,35,364ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ವಿವರಿಸಿದೆ. 24ಗಂಟೆಯಲ್ಲಿ 70 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,600ಕ್ಕೆ ಏರಿಕೆಯಾಗಿದೆ.

ಭಾರತದ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.50ರಷ್ಟಿದೆ. 24ಗಂಟೆಯಲ್ಲಿ 1,114 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 2021ರ ಜೂನ್ ನಲ್ಲಿ ಮೂರು ಕೋಟಿ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 2022ರ ಜನವರಿ 25ರಂದು ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ನಾಲ್ಕು ಕೋಟಿ ದಾಟಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next