Advertisement

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯತ್ತ; 24ಗಂಟೆಯಲ್ಲಿ 2.11 ಲಕ್ಷ ಪ್ರಕರಣ

10:27 AM May 27, 2021 | Team Udayavani |

ನವದೆಹಲಿ: ಭಾರತದಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 2,11,298 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 3,847 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಮೇ 27) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ರಕ್ತದ ಮಡುವಿನಲ್ಲಿ ಒದ್ದಾಟ ನಡೆಸಿದ ಆರೋಗ್ಯಾಧಿಕಾರಿ: ಅಲ್ಲೇ ಇದ್ದರೂ ನೆರವಿಗೆ ಬಾರದ ಶಾಸಕ

ದೇಶಾದ್ಯಂತ 24ಗಂಟೆಗಳಲ್ಲಿ 2,11,298 ಹೊಸ ಕೋವಿಡ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ 19 ಸೋಂಕು ಪ್ರಕರಣ 2,73,69,093ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಲಾಗಿದೆ.

ಹಿಂದಿನ 24ಗಂಟೆಗಳ ಅವಧಿಯಲ್ಲಿ 2.08 ಲಕ್ಷ ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಬುಧವಾರ ಕೋವಿಡ್ ನಿಂದ 4,157 ಮಂದಿ ಸಾವನ್ನಪ್ಪಿದ್ದರು. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 3,15,235ಕ್ಕೆ ಹೆಚ್ಚಳವಾಗಿದೆ.

ಮೇ 26ರವರೆಗೆ ದೇಶದಲ್ಲಿ 33,69,69,352 ಮಂದಿಯ ಕೋವಿಡ್ ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ. ಇದರಲ್ಲಿ ಬುಧವಾರ 21,57,857 ದಾಖಲೆ ಪ್ರಮಾಣದ ಪರೀಕ್ಷೆ ನಡೆಸಲಾಗಿತ್ತು ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next