ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 25,467 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,19,551ಕ್ಕೆ ಇಳಿಕೆಯಾಗಿದೆ ಎಂದು ಮಂಗಳವಾರ (ಆಗಸ್ಟ್ 24) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನಾಲ್ಕು ವರ್ಷಗಳಿಂದ ಚಿಂಪಾಂಜಿ ಜತೆ ಮಹಿಳೆಯ ಲವ್ ಅಫೇರ್!
ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 354 ಮಂದಿ ಸಾವನ್ನಪ್ಪಿದ್ದು, ಈವರೆಗೆ ಕೋವಿಡ್ ನಿಂದ ಒಟ್ಟು 4,35,110 ಮಂದಿ ಸಾವನ್ನಪ್ಪಿದ್ದಾರೆ.
156 ದಿನಗಳ ಬಳಿಕ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.68ಕ್ಕೆ ಏರಿಕೆಯಾಗಿದೆ. ಇದು 2020ರ ಮಾರ್ಚ್ ನಂತರದ ಗರಿಷ್ಠ ಪ್ರಮಾಣವಾಗಿದೆ ಎಂದು ವರದಿ ತಿಳಿಸಿದೆ.
ಕಳೆದ 24ಗಂಟೆಗಳಲ್ಲಿ 14,373ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಅಲ್ಲದೇ ಸೋಮವಾರ 16,47,526 ಮಂದಿಯನ್ನು ಪರೀಕ್ಷಿಸಲಾಗಿದೆ. ಈವರೆಗೆ ದೇಶಾದ್ಯಂತ 50,93,91,792 ಮಂದಿಯನ್ನು ಪರೀಕ್ಷೆಗೆ ಗುರಿಪಡಿಸಲಾಗಿದೆ ಎಂದು ಅಂಕಿಅಂಶ ಹೇಳಿದೆ.