Advertisement

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 30,773 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆ

12:24 PM Sep 19, 2021 | Team Udayavani |

ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,773 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಶನಿವಾರ ವರದಿಯಾದ ಪ್ರಕರಣಗಳಿಗಿಂತ ಶೇ.13.7 ರಷ್ಟು ಇಳಿಕೆಯಾಗಿದೆ.

Advertisement

ಕೇಂದ್ರ ಆರೋಗ್ಯ ಇಲಾಖೆ ನೀಡಿದ ವರದಿಯಂತೆ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 309 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ 4,44,838 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,34,48,163ಕ್ಕೆ ತಲುಪಿದೆ. ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 3,32,158ಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 38,945 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,26,71,167ಕ್ಕೆ ತಲುಪಿದೆ.

ಇದನ್ನೂ ಓದಿ:ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದ ಕ್ಯಾಂಪಸ್ ಗೆ ಶಂಕರಾಚಾರ್ಯರ ಹೆಸರು ಸೂಕ್ತ :ಕರಂದ್ಲಾಜೆ

Advertisement

ಐದು ರಾಜ್ಯಗಳಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡು ಬರುತ್ತಿದೆ. ಕೇರಳ ರಾಜ್ಯದಲ್ಲಿ 19,325 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 3,391 ಪ್ರಕರಣಗಳು, ತಮಿಳುನಾಡು 1,653 ಪ್ರಕರಣಗಳು, ಆಂಧ್ರ ಪ್ರದೇಶ 1,174 ಪ್ರಕರಣಗಳು ಮತ್ತು ಮಿಜೋರಾಂ 1,104 ಪ್ರಕರಣಗಳು ವರದಿಯಾಗಿದೆ.

ದೇಶದಲ್ಲಿ ಒಂದೇ ದಿನ 15,59,895 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ ಒಟ್ಟು 55,23,40,168 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next