ನವ ದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 31,222 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 24 ಗಂಟೆಗಳಲ್ಲಿ ಕೋವಿಡ್ ಕಾರಣಗಳಿಂದಾಗಿ 290 ಮಂದಿ ಸಾವಿಗೀಡಾಗಿದ್ದಾರೆ ಎಂದು ಇಂದು(ಮಂಗಳವಾರ, ಸಪ್ಟೆಂಬರ್ 7) ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ ಸೋಂಕಿನಿಂದ 42,942 ಮಂದಿ ಗುಣಮುಖರಾಗಿದ್ದು, ಗುಣಮುಖ ಪ್ರಮಾಣ ಶೇ 97.48ರಷ್ಟಿರುವುದು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಇಂದು ಸಿಎಂ ದೆಹಲಿಗೆ: ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಬೊಮ್ಮಾಯಿ!
ಇನ್ನು, ದೇಶದಲ್ಲಿ ಪ್ರಸ್ತುತ ಒಟ್ಟು 3,92,864 ಸಕ್ರಿಯ ಪ್ರಕರಣಗಳು ಇವೆ. ವಾರದಲ್ಲಿ ಕೋವಿಡ್ ದೃಢ ಪ್ರಮಾಣ ಶೇಕಡಾ 2.56ರಷ್ಟಿದೆ ಹಾಗೂ ಕಳೆದ 74 ದಿನಗಳಲ್ಲಿ ಶೇಕಡಾ 3 ಕ್ಕಿಂತಲೂ ಕಡಿಮೆ ದಾಖಲಾಗಿದೆ.
ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,30,58,843 ಕ್ಕೆ ಹೆಚ್ಚಳವಾಗಿದ್ದು, ಈ ಪೈಕಿ 3,22,24,937 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,41,042 ಮಂದಿ ಮೃತಪಟ್ಟಿದ್ದಾರೆ.
ದೇಶದಾದ್ಯಂತ ಈವರೆಗೂ 69,90,62,776 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ ಭಾರತೀಯ ಔಷದ ನಿಯಂತ್ರಣ ಮಂಡಳಿ ತಿಳಿಸಿರುವುದಾಗಿ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಓವಲ್ ವಿಜಯದೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಅಗ್ರ ಸ್ಥಾನಕ್ಕೇರಿದ ಭಾರತ