ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,35,31,498 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಸೆಪ್ಟೆಂಬರ್ 23) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಶಾಲೆಯಲ್ಲಿ ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,01,604ಕ್ಕೆ ಇಳಿಕೆಯಾಗಿದೆ ಇದು ಕಳೆದ 187 ದಿನಗಳ ಬಳಿಕದ ಕನಿಷ್ಠ ಪ್ರಮಾಣದ್ದಾಗಿದೆ. ಕಳೆದ 24ಗಂಟೆಗಳಲ್ಲಿ 282 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ 19,675 ಕೋವಿಡ್ ಪ್ರಕರಣ ವರದಿಯಾಗಿದ್ದು, 142 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಭಾರತದಲ್ಲಿ ಕೋವಿಡ್ ಲಸಿಕೆ ಅಭಿಯಾನ ಬಿರುಸುಗೊಂಡಿದ್ದು, ಈವರೆಗೆ ದೇಶಾದ್ಯಂತ 83.39 ಕೋಟಿ ಡೋಸ್ ನೀಡಲಾಗಿದೆ ಎಂದು ವರದಿ ಹೇಳಿದೆ. ಕಳೆದ 24ಗಂಟೆಗಳಲ್ಲಿ 31,990 ಮಂದಿ ಚೇತರಿಸಿಕೊಂಡಿದ್ದಾರೆ.