ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,342 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 483 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಜುಲೈ 23) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ನೆರೆಯ ಅವಾಂತರ, ಅಪಾಯದಂಚಿನ ಪ್ರದೇಶಗಳಿಂದ ಜನರ ಸ್ಥಳಾಂತರ
ಕಳೆದ 24ಗಂಟೆಯಲ್ಲಿ 38,740 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಚೇತರಿಕೆ ಪ್ರಮಾಣ ಶೇ.97.36ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,05,513ಕ್ಕೆ ತಲುಪಿದೆ ಎಂದು ಹೇಳಿದೆ.
ವಾರದ ಪಾಸಿಟಿವಿಟಿ ದರ ಶೇ.2.14ಕ್ಕೆ ಇಳಿಕೆಯಾಗಿದೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3.12ಕೋಟಿಗೆ ಏರಿಕೆಯಾಗಿದೆ. ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4.19ಲಕ್ಷಕ್ಕೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ 54 ಲಕ್ಷ ಕೋವಿಡ್ ಡೋಸ್ ನೀಡಲಾಗಿದೆ. ಇದರೊಂದಿಗೆ ದೇಶದಲ್ಲಿ ಈವರೆಗೆ 42.34 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.