Advertisement

ದೇಶದಲ್ಲಿ 3,92,48 ಕೋವಿಡ್ ಹೊಸ ಪ್ರಕರಣಗಳು ಪತ್ತೆ : 3,689 ಮಂದಿ ಸಾವು

11:46 AM May 02, 2021 | Girisha |

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಒಂದೇ ದಿನ ಬರೋಬ್ಬರಿ 3,92,488 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.

Advertisement

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ಸೋಂಕಿಗೆ 3,689 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 2,15,542ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,07,865 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 33,49,644 ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಒಟ್ಟು 15,68,16,031 ಮಂದಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next