ನವ ದೆಹಲಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40 ಸಾವಿರಕ್ಕಿಂತ ಅಧಿಕ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಆಗಷ್ಟ್ 02) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ ಹೊಸ ಸೋಂಕಿನ ಪ್ರಮಾಣ ಹಾಗೂ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಒಟ್ಟು 40,134 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ. ಕಳೆದ ಐದು ದಿನಗಳಲ್ಲಿ ಇದ್ದ ಸೋಂಕಿನ
ಏರಿಕೆಗೆ ಸ್ವಲ್ಪ ಬ್ರೇಕ್ ಬಿದ್ದಿದೆ.
ಇದನ್ನೂ ಓದಿ : ಮತ್ತೆ ವಾರಾಂತ್ಯ ಕರ್ಫ್ಯೂ?ಸೋಂಕು ಹೆಚ್ಚಾಗದಂತೆ ನಿಗಾ
ಏತನ್ಮಧ್ಯೆ ಕೋವಿಡ್ ಸೋಂಕಿನಿಂದ ಕಳೆದ 24ಗಂಟೆಗಳಲ್ಲಿ 422 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 31 695, 959ಕ್ಕೆ ಏರಿಕೆಯಾಗಿದೆ. ಅದೇ ರೀತಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,24,773ಕ್ಕೆ ಹೆಚ್ಚಳವಾಗಿದೆ.
ಇನ್ನು, ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿದೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,28,984 ಪರೀಕ್ಷೆಗಳನ್ನು ನಡೆಸಲಾಗಿದೆ. ಒಟ್ಟಾರೆಯಾಗಿ, ಭಾರತವು ಇಲ್ಲಿಯವರೆಗೆ 46.96 ಕೋಟಿ (46,96,45,494) ಪರೀಕ್ಷೆಗಳನ್ನು ನಡೆಸಿದೆ. ವಾರದ ಪಾಸಿಟಿವಿಟಿ ದರ ಪ್ರಸ್ತುತ 2.37% ರಷ್ಟಿದೆ ಮತ್ತು ದೈನಂದಿನ ಪಾಸಿಟಿವಿಟಿ ದರವು ಇಂದು 2.81% ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಮತ್ತೊಂದು ಹಾಕಿ ವಿಕ್ರಮ:ಆಸೀಸ್ ತಂಡವನ್ನು ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದ ಭಾರತ ವನಿತಾ ತಂಡ