ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 41,383 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 507 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಜುಲೈ 22) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ರೈತರ ಪ್ರತಿಭಟನೆ :ಜಂತರ್ ಮಂತರ್ ನಲ್ಲಿ ನಮ್ಮದೇ ಸಂಸತ್ ಅಧಿವೇಶನ ಮಾಡ್ತೇವೆ ಎಂದ ರೈತ ಮುಖಂಡರು
ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 3,12,57,720ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ 19 ಸೋಂಕಿನಿಂದ ಈವರೆಗೆ 4,18,987 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,09,394ಕ್ಕೆ ಏರಿಕೆಯಾಗಿದೆ. ಈವರೆಗೆ ದೇಶದಲ್ಲಿ ಒಟ್ಟು 3,04,29,339 ಮಂದಿ ಗುಣಮುಖರಾಗಿದ್ದಾರೆ. ವಾರದ ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಕ್ಕಿಳಿದಿದ್ದು, ಶೇ.2.21ಕ್ಕೆ ಇಳಿಕೆಯಾಗಿದೆ. ಪ್ರಸ್ತುತ ದಿನದ ಪಾಸಿಟಿವಿಟಿ ದರ ಶೇ.2.41ಕ್ಕೆ ಇಳಿಕೆಯಾಗಿದೆ.
ದೇಶಾದ್ಯಂತ ಕೋವಿಡ್ ಲಸಿಕೆ ನೀಡಿಕೆ ಅಭಿಯಾನದಲ್ಲಿ ಕನಿಷ್ಠ 41.78 ಕೋಟಿ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದರೂ ಮುಂಜಾಗ್ರತಾ ಕ್ರಮ ಅಗತ್ಯ ಎಂದು ಸಚಿವಾಲಯ ಎಚ್ಚರಿಕೆ ನೀಡಿದೆ.