ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,506 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಸಮಯದಲ್ಲಿ 895 ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಸದ್ಯ 4.54 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ 24 ಗಂಟೆ ಅವಧಿಯಲ್ಲಿ 41,000 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 2.99 ಕೋಟಿ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದ ರಿಕವರಿ ರೇಟ್ ಈಗ ಶೇಕಡಾ 97.20 ಕ್ಕೆ ಏರಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣವು ಶೇಕಡಾ 2.25 ರಷ್ಟಿದೆ. ಕೋವಿಡ್ ಪಾಸಿಟಿವಿಟಿ ದರ ಶೇಕಡಾ 5 ಕ್ಕಿಂತ ಕಡಿಮೆಯಿದ್ದರೆ ಅದು ಸುರಕ್ಷಿತ ವಲಯ ಎಂದು ವಿಶ್ವಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಘೋಷಿಸಿದೆ.
ಇದನ್ನೂ ಓದಿ:ಬಂಟ್ವಾಳಕ್ಕೆ ಬಂತು ಕೆಎಸ್ಸಾರ್ಟಿಸಿ ಐಸಿಯು ಬಸ್ : ಜು. 13ರಿಂದ ನಿತ್ಯ ಕಾರ್ಯಾಚರಣೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 37 ಲಕ್ಷ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಒಟ್ಟು ಡೋಸೇಜ್ 37.6 ಕೋಟಿ ಮೀರಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಡೆಲ್ಟಾ ರೂಪಾಂತರವು ಹರಡುತ್ತಿದ್ದಂತೆ ವಿಶ್ವದ ಹೆಚ್ಚಿನ ಪ್ರದೇಶಗಳಲ್ಲಿ ಸೋಂಕುಗಳು ಹೆಚ್ಚುತ್ತಿವೆ ಎಂದು ಡಬ್ಲ್ಯುಎಚ್‌ಒ ಮುಖ್ಯ ವಿಜ್ಞಾನಿಗಳು ತಿಳಿಸಿದ್ದಾರೆ. ವಿಶ್ವದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಹಿಮ್ಮೆಟ್ಟುತ್ತಿಲ್ಲ ಎಂದು ಸ್ಪಷ್ಟ ಪುರಾವೆಗಳೊಂದಿಗೆ ಡಬ್ಲ್ಯುಎಚ್‌ಒ ಹೇಳಿದೆ.