ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 43,071 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಅವಧಿಯಲ್ಲಿ ದೇಶದಲ್ಲಿ 52,299 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. 955 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೇರಳ ರಾಜ್ಯದಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಕೇರಳದಲ್ಲಿ ಶನಿವಾರ 12,456 ಮಂದಿ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದ್ದು, ಅಲ್ಲಿ 9489 ಸೋಂಕು ಪ್ರಕರಣಗಳು ದೃಢವಾಗಿದೆ. ತಮಿಳುನಾಡಿನಲ್ಲಿ 4013 ಸೋಂಕು ಪ್ರಕರಣಗಳು, ಆಂಧ್ರ ಪ್ರದೇಶ ರಾಜ್ಯದಲ್ಲಿ 2930 ಸೋಂಕು ಪ್ರಕರಣಗಳು ಮತ್ತು ಒಡಿಶಾ ರಾಜ್ಯದಲ್ಲಿ 2917 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಇದನ್ನೂ ಓದಿ:ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಹಾರುವ ವಸ್ತು ಪತ್ತೆ: ತನಿಖೆ ಚುರುಕು
ಈ ಐದು ರಾಜ್ಯಗಳಲ್ಲಿ ದೇಶದ ಶೇಕಡಾ 73.84 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಅವಧಿಯಲ್ಲಿ ದೇಶದಲ್ಲಿ 955 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲೇ 371 ಮಂದಿ ಸೋಂಕಿತರು ಮರಣ ಹೊಂದಿದ್ದಾರೆ.