ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 45, 892 ಕೋವಿಡ್ 19 ನೂತನ ಪ್ರಕರಣ ಪತ್ತೆಯಾಗಿದ್ದು, 817 ಮಂದಿ
ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ(ಜುಲೈ 08) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಾಶ್ಮೀರ ಎನ್ ಕೌಂಟರ್: ಐವರು ಉಗ್ರರ ಹತ್ಯೆಗೈದ ಭದ್ರತಾ ಪಡೆಗಳು
ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಒಟ್ಟು 3,07,09,557ಕ್ಕೆ ಏರಿಕೆಯಾಗಿದೆ. ಸತತ 30ನೇ ದಿನ ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಸೋಂಕು ವರದಿಯಾಗುತ್ತಿದೆ. ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕಡಿಮೆಯಾಗಿರುವುದಾಗಿ ವಿವರಿಸಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,60,704ಕ್ಕೆ ಇಳಿಕೆಯಾಗಿದೆ. ಅಲ್ಲದೇ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4,05,028ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24ಗಂಟೆಗಳಲ್ಲಿ ಒಟ್ಟು 44,291 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ದೇಶದಲ್ಲಿ ಒಟ್ಟು 2,98,43,825 ಮಂದಿ ಗುಣಮುಖರಾಗಿದ್ದಾರೆ ಎಂದು ಹೇಳಿದೆ.