ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 5,784 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 252 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಡಿಸೆಂಬರ್ 14) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪರಿಷತ್ ಚುನಾವಣೆ: ಕೊಡಗಿನಲ್ಲಿ ಬಿಜೆಪಿ, ಹಾಸನದಲ್ಲಿ ಸೂರಜ್ ರೇವಣ್ಣ ಗೆಲುವು
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,03,644ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,75,888ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 7,995 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಅದೇ ರೀತಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 88,993ಕ್ಕೆ ಇಳಿಕೆಯಾಗಿದೆ.
ಕಳೆದ 47 ದಿನಗಳಿಂದ ದೇಶದಲ್ಲಿ 15,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ. 563 ದಿನಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.