ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 6,809 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 16 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 05) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ರೀಲ್ಸ್ ಮಾಡಲು ಹೋಗಿ ಯುವಕನ ಹುಚ್ಚಾಟ : ರೈಲು ಢಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯ..
ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,38,80,464 ಕೋಟಿಗೆ ಏರಿಕೆಯಾಗಿದೆ. ಭಾರತದಲ್ಲಿನ ಕೋವಿಡ್ ಸೋಂಕಿನ ಒಟ್ಟು ಚೇತರಿಕೆ ಪ್ರಮಾಣ ಶೇ.98.69ರಷ್ಟಿದೆ.
ಭಾರತದಲ್ಲಿನ ಸಕ್ರಿಯ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ 53,974ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ. ಭಾನುವಾರ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 55,114ರಷ್ಟಿತ್ತು.
ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,007ಕ್ಕೆ ತಲುಪಿದೆ.
ಐಸಿಎಂಆರ್ ಅಂಕಿಅಂಶದ ಪ್ರಕಾರ, ದೇಶಾದ್ಯಂತ ಸೆಪ್ಟೆಂಬರ್ 04ರವರೆಗೆ 88,73,79,274 ಕೋವಿಡ್ ಸ್ಯಾಂಪಲ್ಸ್ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದೆ. 2020ರ ಮಾರ್ಚ್ ನಲ್ಲಿ ದೇಶದಲ್ಲಿ ಕೋವಿಡ್ ಸೋಂಕಿನಿಂದ ಮೊದಲ ಸಾವು ಸಂಭವಿಸಿದ ಪ್ರಕರಣ ವರದಿಯಾಗಿತ್ತು.