ನವದೆಹಲಿ:ಭಾರತದಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 5,921 ಕೋವಿಡ್ ಪ್ರಕರಣ ವರದಿಯಾಗಿದೆ. ಅಲ್ಲದೇ 289 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮಾರ್ಚ್ 05) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಝಪೊರಿಝಿಯಾ ಪರಮಾಣು ಸ್ಥಾವರದ ಮೇಲೆ ಮತ್ತೆ ಉಕ್ರೇನ್ ನಿಯಂತ್ರಣ; ಆಸ್ಪತ್ರೆ ಮೇಲೆ ರಷ್ಯಾ ದಾಳಿ!
ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,14,878ಕ್ಕೆ ಏರಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.63ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.084ರಷ್ಟಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
24ಗಂಟೆಯಲ್ಲಿ ದೇಶದಲ್ಲಿ 11,651 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,23,78,721ಕ್ಕೆ ಏರಿಕೆಯಾಗಿದೆ.
ಮಾರ್ಚ್ 4ರಂದು ಭಾರತದಲ್ಲಿ 6,396 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 201 ಮಂದಿ ಸಾವನ್ನಪ್ಪಿದ್ದರು. ಸತತ 27ದಿನಗಳಿಂದ ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ.