ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 60,753 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. 2495 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜೂನ್ 19) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕ್ರೀಡೆಗೆ ಪೂರಕ ವಾತಾವರಣವೇ ಇಲ್ಲದ ಹೊತ್ತಿನಲ್ಲಿ ದೇಶವನ್ನೇ ಪ್ರಭಾವಿಸಿದ್ದರು ಮಿಲ್ಖಾ
ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 7,60,019ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 74 ದಿನಗಳಲ್ಲಿನ ಕನಿಷ್ಠ ಪ್ರಮಾಣದ ಪ್ರಕರಣವಾಗಿದೆ. ದೇಶದಲ್ಲಿ ಕೋವಿಡ್ ಚೇತರಿಕೆಯ ಪ್ರಮಾಣ ಶೇ.96.17ರಷ್ಟಿದೆ. ವಾರದ ಪಾಸಿಟಿವಿಟಿ ದರ ಕೂಡಾ ಶೇ.5ಕ್ಕಿಂತ ಕಡಿಮೆ ಇದ್ದಿರುವುದಾಗಿ ವರದಿ ವಿವರಿಸಿದೆ.
ಕಳೆದ 24 ಗಂಟೆಗಳಲ್ಲಿ 97,743 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಗುಣಮುಖರಾದವರ ಒಟ್ಟು ಸಂಖ್ಯೆ 2,86,78,390ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಕೋವಿಡ್ ಎರಡನೇ ಅಲೆಯ ಪ್ರಕರಣ ಕಡಿಮೆಯಾಗುತ್ತಿದ್ದು, ಹಲವು ರಾಜ್ಯಗಳು ಲಾಕ್ ಡೌನ್ ಅನ್ನು ಜುಲೈ1ರವರೆಗೆ ವಿಸ್ತರಿಸಿದೆ. ಅಲ್ಲದೇ ಹಲವೆಡೆ ಕೋವಿಡ್ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯದ ಲಾಕ್ ಡೌನ್ ಮುಂದುವರಿಸಿರುವುದಾಗಿ ತಿಳಿಸಿದೆ.