ನವದೆಹಲಿ:ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 62,224 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 2,542 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಜೂ.16) ಬಿಡುಗಡೆ ಮಾಡಿರುವ ಅಂಕಿಅಂಶ ತಿಳಿಸಿದೆ.
ಇದನ್ನೂ ಓದಿ:ಮತ್ತೆ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್
ದೇಶದ ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. ಇದರಲ್ಲಿ ಕೇರಳದಲ್ಲಿ 12,246 ಕೋವಿಡ್ ಪ್ರಕರಣ, ತಮಿಳುನಾಡು 11,805, ಮಹಾರಾಷ್ಟ್ರ 7652, ಆಂಧ್ರಪ್ರದೇಶ 5,741 ಹಾಗೂ ಕರ್ನಾಟಕದಲ್ಲಿ 5041 ಪ್ರಕರಣಗಳು ಪತ್ತೆಯಾಗಿದೆ.
ಕಳೆದ 24ಗಂಟೆಯಲ್ಲಿ 2,542 ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 3,79,573ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 2,96ಕೋಟಿಗೆ ಏರಿಕೆಯಾಗಿದೆ ಎಂದು ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಸತತವಾಗಿ ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಕ್ಕೆ ಇಳಿದಿದ್ದು, ದಿನಂಪ್ರತಿಯ ಪಾಸಿಟಿವಿಟಿ ದರ ಶೇ.3.22ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ವಿವರಿಸಿದೆ.