ನವದೆಹಲಿ: ಭಾರತದಲ್ಲಿ ಕೋವಿಡ್ ಹಾವಳಿ ತೀವ್ರವಾಗಿ ಮುಂದುವರಿಯುತ್ತಿದ್ದು, ಭಾನುವಾರದಿಂದ ಸೋಮವಾರದ (ಮಾರ್ಚ್ 29) 24 ಗಂಟೆ ಅವಧಿಯಲ್ಲಿ ಒಟ್ಟು 68,020 ಹೊಸ ಸೋಂಕಿತರು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಇದನ್ನೂ ಓದಿ:NCT ಮಸೂದೆಗೆ ರಾಷ್ಟ್ರಪತಿ ಅಂಕಿತ, ದೆಹಲಿ ಸಿಎಂಗಿಂತ ಗವರ್ನರ್ ಗೆ ಹೆಚ್ಚಿನ ಅಧಿಕಾರ
ದೇಶದಲ್ಲಿ ಕಳೆದ 24ಗಂಟೆ ಅವಧಿಯಲ್ಲಿ ಕೋವಿಡ್ ಸೋಂಕಿಗೆ 291 ಮಂದಿ ಸಾವನ್ನಪ್ಪಿದ್ದು, ಒಟ್ಟು ಕೋವಿಡ್ ಸಾವಿನ ಸಂಖ್ಯೆ 1,61,843ಕ್ಕೆ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಈವರೆಗೆ 11,355,993 ಸೋಂಕಿತರು ಗುಣಮುಖರಾಗಿ ಡಿಸ್ ಚಾರ್ಜ್ ಆಗಿರುವುದಾಗಿ ತಿಳಿಸಿದೆ.
ಆತಂಕಕಾರಿ ವಿಷಯ ಏನೆಂದರೆ ಸೋಮವಾರ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿ ಹೋಗಿದ್ದು, ಕಳೆದ ಕೆಲವು ವಾರಗಳಲ್ಲಿ ನೂತನ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1,78,000ಕ್ಕೆ ಏರಿಕೆಯಾಗಿದೆ.
ದೇಶದ ಎಂಟು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಜನರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.