ನವದೆಹಲಿ: ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಮಂಗಳವಾರ (ಮಾರ್ಚ್ 01) 6,915 ಕೋವಿಡ್ ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ರಷ್ಯಾ ಫಿರಂಗಿ ದಾಳಿಗೆ 70 ಉಕ್ರೇನ್ ಸೈನಿಕರು ಬಲಿ; ಹಲವು ನಗರಗಳಲ್ಲಿ ವೈಮಾನಿಕ ದಾಳಿ ಭೀತಿ
ದೇಶದಲ್ಲಿ 24ಗಂಟೆಯಲ್ಲಿ 180 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,14,023ಕ್ಕೆ ತಲುಪಿದೆ.
ಒಂದೇ ದಿನದಲ್ಲಿ ದೇಶದಲ್ಲಿ 10,129ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲೀಗ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 92,472ಕ್ಕೆ ಇಳಿಕೆಯಾಗಿರುವುದಾಗಿ ಅಂಕಿಅಂಶ ವಿವರಿಸಿದೆ.
24ಗಂಟೆಯಲ್ಲಿ 16,864 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,23,24,550ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.59ರಷ್ಟಿದೆ.
ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ದೇಶಾದ್ಯಂತ ಈವರೆಗೆ 177.70 ಕೋಟಿಗೂ ಅಧಿಕ ಡೋಸ್ ನೀಡಲಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ 9,01,647 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.